New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು-ವಿ.ಸುನೀಲ್ ಕುಮಾರ್

ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು-ವಿ.ಸುನೀಲ್ ಕುಮಾರ್

ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆಮತ್ತು ಸಾಂಸ್ಕೃತಿಕ ಕ್ಷೇತ್ರಕೂ ತೆರೆದುಕೊಳ್ಳಬೇಕು. ವಿದ್ಯಾವಂತ ಮತ್ತು ಸಂಸ್ಕಾರವಂತರಾಗಬೇಕು ಎಂದು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಂ ಪಾರ್ಕ್‌ನಲ್ಲಿನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ” ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಎಸ್.ವಿ.ಟಿ. ವಿದ್ಯಾಸಂಸ್ಥೆಗಳ ಸಂಚಾಲಕರಾದ ಕೆ.ಪಿ.ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶಕ್ಕೆ ಮತ್ತು ಸಮಾಜಕ್ಕೆ ಉತ್ತಮ ಪ್ರಜೆಗಳಾಗುವಂತೆ ಕರೆ ನೀಡಿದರು. ಕ್ರಿಯೇಟಿವ್ ವಿದ್ಯಾಸಂಸ್ಥೆಯ ಸಹಸಂಸ್ಥಾಪಕರಾದ ಡಾ.ಗಣನಾಥ ಶೆಟ್ಟಿ ಪ್ರಾಸ್ತಾವಿಕನುಡಿಗಳನ್ನು ಆಡಿದರು. ಬಿಲ್ಲವ ಯುವ ಬ್ರಿಗೇಡ್‌ನ ಅಧ್ಯಕ್ಷ ಭರತ್‌ಅಂಚನ್, ಖ್ಯಾತ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮೇಲ್ವಿಚಾರಕರಾದ ಶ್ರೀಮತಿ ಸೌಮ್ಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಸಹಸಂಸ್ಥಾಪಕರಾದ ಅಶ್ವತ್‌ಎಸ್.ಎಲ್, ಆದರ್ಶಎಂ.ಕೆ, ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟಿ ಸ್ವಾಗತಿಸಿದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಲೋಹಿತ್‌ಎಸ್.ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share