New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯಲ್ಲಿ ಹೆಚ್. ಕೆ. ಎಸ್ ನ ದುರ್ಗಶ್ರೀ ಎಂ ಅದ್ಭುತ ಸಾಧನೆ

ಯು.ಸಿ.ಇ.ಇ.ಡಿ ಪ್ರವೇಶ ಪರೀಕ್ಷೆಯಲ್ಲಿ ಹೆಚ್. ಕೆ. ಎಸ್ ನ  ದುರ್ಗಶ್ರೀ ಎಂ ಅದ್ಭುತ ಸಾಧನೆ

ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ಐ.ಐ.ಟಿ, ಬಾಂಬೆ ಅವರು ನಡೆಸುವ ಬ್ಯಾಚುಲರ್ ಆಫ್ ಡಿಸೈನ್ ಕೋರ್ಸ್ ಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಜನವರಿ 21ರಂದು ನಡೆದ ಯು.ಸಿ.ಇ.ಇ.ಡಿ (UCEED)ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ .ಎಸ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್ ನ ಅಡಿಯಲ್ಲಿ ತರಬೇತಿಯನ್ನು ಪಡೆದು ದುರ್ಗಶ್ರೀ ಎಂ ಪ್ರಥಮ ಪ್ರಯತ್ನದಲ್ಲೇ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 98ನೇ ರಾಂಕ್ ಪಡೆದು ಅದ್ಭುತ ಸಾಧನೆಗೈದು ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.

ಪ್ರಸ್ತುತ ಬಹುಬೇಡಿಕೆಯುಳ್ಳ ಈ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆಗೆ  ಹೆಚ್. ಕೆ. ಎಸ್ ವಿದ್ಯಾ ಸಂಸ್ಥೆಯು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್ ನ ಅಡಿಯಲ್ಲಿ ಅತ್ಯುತ್ತಮ  ತರಬೇತಿ ನೀಡುತ್ತಿದ್ದು, ಆರ್ಕಿಟೆಕ್ಚರ್ ಕೋರ್ಸ್ ಗಳಾದ ನಾಟ (NATA), ಜೆ .ಇ .ಇ, ಬಿ ಆರ್ಕ್,ಹಾಗೂ ನಿಫ್ಟ್ (NIFT), ಜೆ .ಇ. ಇ. ಮೈನ್ಸ್ ಮತ್ತು ಅಡ್ವಾನ್ಸ್ಡ್ ಗೆ ತರಬೇತಿ ನೀಡುತ್ತಿರುವ ಹಾಸನ ಜಿಲ್ಲೆಯ ಪ್ರಮುಖ ಸಂಸ್ಥೆಯಾಗಿದೆ.

ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ  ರಕ್ಷಿತ್ ಬಿ ಎಸ್  ಹಾಗೂ  ಎಲ್ಲಾ  ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share